ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ತಾಲೂಕಿನ ಅವರಾದ್ ಗ್ರಾಮದ ಬಳಿ ಬೈಕ್ ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಅಂಬರೀಶ್, ರವಿ, ಮಲ್ಲಿಕಾರ್ಜುನ ಮತ್ತು ನರೇಶ್ ಎಂದು ಗುರುತಿಸಲಾಗಿದೆ.
ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ನಂತರ ಎರಡು ಕಾರುಗಳು ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿವೆ. ಅಪಘಾತದ ಪರಿಣಾಮ ಬೈಕ್ ಸವಾರ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಕಲಬುರಗಿ ಸಂಚಾರಿ ಠಾಣೆ-2ರಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ.