Wednesday, October 5, 2022

Latest Posts

ಬೈಕ್-ಟಿಪ್ಪರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದಿಗಂತ ವರದಿ ವಿಜಯಪುರ:

ಬೈಕ್ – ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಯಾದಗಿರಿ ತಾಲೂಕಿನ ಗಿರಿನಗರ ಗ್ರಾಮದ ನಿವಾಸಿ ಹಣಮಂತ ಸತ್ಯಪ್ಪ ಮೀನುಗಾರ (50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.

ಬೈಕ್ ನ ಹಿಂಬದಿ ಸವಾರ ಮೃತನ ಪುತ್ರ ರವಿಚಂದ್ರ(17) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ ಐ ಕೆ.ವಾಲಿಕಾರ ಭೇಟಿ ನೀಡಿ ಪರಿಶೀಲಿಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!