ಹೊಸ ದಿಗಂತ ವರದಿ, ಮಳವಳ್ಳಿ:
ಬೈಕ್ ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಟಿ.ಕಾಗೇಪುರ ಬಳಿ ಸಂಭವಿಸಿದೆ.
ತಾಲ್ಲೂಕಿನ ಮಾದಹಳ್ಳಿ ಗ್ರಾಮದ ಕೆಂಪೇಗೌಡ ಎಂಬುವರ ಪುತ್ರ ಸಂತೋಷ್ ಕುಮಾರ್ (19) ಮೃತ ಯುವಕನಾಗಿದ್ದಾನೆ, ಸಂತೋಷ್ ತಮ್ಮ ಬೈಕ್ ನಲ್ಲಿ ಟಿ.ಕಾಗೇಪುರ ಕಡೆಯಿಂದ ಸ್ವಗ್ರಾಮ ಮಾದಹಳ್ಳಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರವವಾಗಿ ಸಾವನ್ನಪ್ಪಿದ್ದಾರೆ.
ಈ ಸಂಬಅಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಾಗಿದ್ದು, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ