ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಸವಾರರಿಬ್ಬರ ಸಾವು

ಹೊಸದಿಗಂತ ವರದಿ, ಹಾಸನ : 

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ನಂತರ ರಸ್ತೆಯಲ್ಲಿ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದೆ.‌ ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸಿ, ಬಸ್‌ನಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಸಂಪೂರ್ಣ ಹೊತ್ತಿಉರಿದ ಕೆ‌ಎಸ್‌ಆರ್‌ಟಿಸಿ ಬಸ್ ಸದ್ಯ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನೆಯು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಮೃತದೇಹಗಳು ತಾಲ್ಲೂಕು ಆಸ್ಪತ್ರೆಗೆ ರವಾನೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!