ಬೈಕ್- ಸಾರಿಗೆ ಬಸ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ವಿಜಯಪುರ:

ಬೈಕ್ ಹಾಗೂ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ರತ್ನಾಪುರ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ತೊರವಿ ತಾಂಡಾದ ರಾಮು ರಾಠೋಡ ಹಾಗೂ ಕಿಟ್ಟು ಎಂದು ಗುರುತಿಸಲಾಗಿದೆ.

ಈ ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದಾಗ, ವಿಜಯಪುರದಿಂದ ಜತ್ ಕಡೆ ಸಾಗುತ್ತಿದ್ದ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!