ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್ ಸವಾರನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಬೈಕ್ ಸವಾರನಿಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದೃಶ್ಯಕಂಡು ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹೆಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಥಣಿಸಂದ್ರದಲ್ಲಿ ಇದು 4ನೇ ಬಲಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲಹಂಕ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾರದ್ದು ತಪ್ಪು? ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ.