ಹೊಸದಿಗಂತ ಡಿಜಿಟಲ್ ಡೆಸ್ಕ್;
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ.
ಬೀರಪ್ಪ ಮುದನೂರ(30), ಶರಣಪ್ಪ ಪರಸನಹಳ್ಳಿ(28) ಅಪಘಾತದಲ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ.
ಅಪಘಾತದ ಸ್ಥಳಕ್ಕೆ ಕೆಂಭಾವಿ ಠಾಣೆಯ ಪಿಎಸ್‌ಐ ಅಮೋಘ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.