ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ನಡುವೆ ತಮ್ಮ ವಿರುದ್ಧದ ಎಫ್‌ಐಆರ್ ಎದ್ದು ಕೋರಿ ಶುಕ್ರವಾರವೇ (ಜು.18) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶನಿವಾರ (ಜು.19) ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು.
ಈಗಾಗಲೇ ಈ ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.