March 15, 2026
Sunday, March 15, 2026
spot_img

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ವಿಚಾರದಲ್ಲಿ ‘ಸುಪ್ರೀಂ’ ಮೆಟ್ಟಿಲೇರಿದ ಬೈರತಿ ಬಸವರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್, ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಸಲ್ಲಿಸಲಾದ ಈ ಅರ್ಜಿಗೆ ಇನ್ನೂ ವಿಚಾರಣಾ ದಿನಾಂಕ ನಿಗದಿಯಾಗಿಲ್ಲ ಎಂದು ಎನ್ನಲಾಗಿದೆ.

ಹೈಕೋರ್ಟ್ ಜಾಮೀನು ರದ್ದಾದ ಬಳಿಕ ಬಸವರಾಜ್ ಸಾರ್ವಜನಿಕ ಸಂಪರ್ಕದಿಂದ ದೂರವಾಗಿದ್ದು, ಸದ್ಯ ಅವರು ಎಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಕಳೆದ ಕೆಲವು ದಿನಗಳಿಂದ ಅವರು ಯಾರಿಗೂ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:

ಮೂರು ತಿಂಗಳ ಹಿಂದೆ ಸಿಐಡಿ ಲುಕ್‌ಔಟ್ ನೋಟಿಸ್ ಹೊರಡಿಸಿದ್ದರೂ, ತಾತ್ಕಾಲಿಕ ಜಾಮೀನಿನಿಂದ ಅದು ಅಮಾನ್ಯಗೊಂಡಿತ್ತು. ಈಗ ಮತ್ತೆ ನೋಟಿಸ್ ಹೊರಡಿಸುವ ಬಗ್ಗೆ ಅಧಿಕಾರಿಗಳು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಮುಂಬೈ ಸೇರಿ ವಿವಿಧ ಸ್ಥಳಗಳಲ್ಲಿ ತಂಡಗಳು ಶೋಧ ಮುಂದುವರಿಸುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !