ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎನ್ನಲಾಗಿದೆ.
9 ದಿನಗಳ ಸಿಐಡಿ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ಮತ್ತಷ್ಟು ಕಸ್ಟಡಿ ನೀಡುವಂತೆ ಮನವಿ ಸಲ್ಲಿಸಿ, ತನಿಖೆಗೆ ಸಂಪೂರ್ಣ ಸಹಕಾರ ಸಿಕ್ಕಿಲ್ಲ ಎಂದು ವಾದಿಸಿದರು. ಆದರೆ ಆರೋಪಿ ಪರ ವಕೀಲರು ಈಗಾಗಲೇ 9 ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿ, ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಜೈಲಿಗೆ ಕಳುಹಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು.
ಮಾಸ್ಕ್ ಧರಿಸಿ ನ್ಯಾಯಾಲಯಕ್ಕೆ ಹಾಜರಾದ ಬೈರತಿ ಬಸವರಾಜ್ ಅವರನ್ನು ಕೋರ್ಟ್ ಐದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಫೆಬ್ರವರಿ 26ರವರೆಗೆ ಅವರು ಜೈಲಿನಲ್ಲಿರಬೇಕಿದೆ.
ಇದನ್ನೂ ಓದಿ:
ಇನ್ನೊಂದೆಡೆ, ಜಯದೇವ ಆಸ್ಪತ್ರೆ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲೂ ಅನುಸರಿಸಲು ನ್ಯಾಯಾಲಯ ಸೂಚನೆ ನೀಡಿದೆ. ಮುಂದಿನ ವಿಚಾರಣೆ ಫೆಬ್ರವರಿ 26ರಂದು ನಡೆಯಲಿದೆ.



