Tuesday, December 23, 2025

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಭೈರತಿ ಬಸವರಾಜ್ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.

ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನಿಗಾಗಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಷೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಬಿಕ್ಲು ಶಿವ ಹತ್ಯೆ ಪ್ರಕರಣದ ಎ5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೈಕೋರ್ಟ್ ಗೆ ನೀಡಿದ್ದ ಮಾಹಿತಿಯನ್ನು ಸಲ್ಲಿಸುವಂತೆ ಎಸ್ ಪಿಪಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.

error: Content is protected !!