ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು ಹೆಸರಿಸಲಾದ ಶಾಸಕ ಬೈರತಿ ಬಸವರಾಜನ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
ಬಂಧನಕ್ಕೆ ಒಳಗಾಗಿರುವ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್, ಬಸವರಾಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದಾರೆ. ಸೂಕ್ತ ಅರ್ಜಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ನ್ಯಾಯಾಲಯ ಸೂಚಿಸಿದೆ. ಗಮನಾರ್ಹವೆಂದರೆ, ಬಂಧನದಿಂದ ಯಾವುದೇ ಮಧ್ಯಂತರ ರಕ್ಷಣೆಯನ್ನು ನೀಡಲು ಹೈಕೋರ್ಟ್ ನಿರಾಕರಿಸಿತು.

