January21, 2026
Wednesday, January 21, 2026
spot_img

ಬಿಲಾಸ್ಪುರ ರೈಲು ದುರಂತ: ರೈಲ್ವೆ ಇಲಾಖೆಯಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಹಾರ ಘೋಷಣೆ:

ಈ ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಭಾರೀ ಪರಿಹಾರವನ್ನು ಘೋಷಿಸಿದೆ:

ಮೃತರ ಕುಟುಂಬಕ್ಕೆ: ತಲಾ 10 ಲಕ್ಷ ರೂ.

ತೀವ್ರವಾಗಿ ಗಾಯಗೊಂಡವರಿಗೆ: ತಲಾ 5 ಲಕ್ಷ ರೂ.

ಸಣ್ಣಪುಟ್ಟ ಗಾಯಗಳಾದವರಿಗೆ: ತಲಾ 1 ಲಕ್ಷ ರೂ.

ಘಟನೆ ನಡೆದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮತ್ತು ಸಿಕ್ಕಿಹಾಕಿಕೊಂಡಿರುವ ಪ್ರಯಾಣಿಕರನ್ನು ಹೊರತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಪಘಾತದ ನಿಖರ ಕಾರಣಗಳ ಕುರಿತು ರೈಲ್ವೆ ಇಲಾಖೆ ತನಿಖೆಗೆ ಆದೇಶಿಸಿದೆ.

Must Read