ದಕ್ಷಿಣ ಆಫ್ರಿಕಾ ಅಧ್ಯಕ್ಷ‌ ರಮಾಫೋಸಾ ಅವರೊಂದಿಗಿನ ದ್ವಿಪಕ್ಷೀಯ ಸಭೆ ಕುರಿತು ಪ್ರಧಾನಿ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಆಫ್ರಿಕಾದ ಬ್ರಿಕ್ಸ್‌ ಶೃಂಗಸಭೆಗೆ ಹಾಜರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಧ್ಯಕ್ಷ ಸಿರಿಲ್ ರಮಾಫೋಸಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಸಭೆ ಬಳಿಕ ಟ್ವೀಟ್‌ ಮಾಡಿದ ಪ್ರಧಾನಿ..”ಅಧ್ಯಕ್ಷ ಸಿರಿಲ್ ರಮಾಫೋಸಾ ಅವರೊಂದಿಗೆ ಅತ್ಯುತ್ತಮವಾದ ಸಭೆಯನ್ನು ನಡೆಸಿದ್ದೇವೆ. ಭಾರತ-ದಕ್ಷಿಣ ಆಫ್ರಿಕಾ ಸಂಬಂಧಗಳನ್ನು ಗಾಢಗೊಳಿಸುವ ಉದ್ದೇಶದಿಂದ ನಾವು ವ್ಯಾಪಕವಾದ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ವ್ಯಾಪಾರ, ರಕ್ಷಣೆ ಮತ್ತು ಹೂಡಿಕೆ ಸಂಬಂಧಗಳು ಪ್ರಮುಖವಾಗಿ ಮುನ್ನೆಲೆಗೆ ಬಂದವು. ನಮ್ಮ ಚರ್ಚೆಗಳು ಗ್ಲೋಬಲ್ ಸೌತ್‌ನ ಧ್ವನಿಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವುದರ ಮೇಲೆ ನಿಂತಿತ್ತು.” ಎಂದು ಪೋಸ್ಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು 15ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಣ ಆಫ್ರಿಕಾ ಅಧ್ಯಕ್ಷರ ಆಹ್ವಾನದ ಮೇರೆಗೆ ತೆರಳಿದರು. ಆಗಸ್ಟ್‌ 22ರಿಂದ 24ರವರೆಗೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬ್ರೆಜಿಲ್‌, ರಷ್ಯಾ, ಭಾರತ ಚೀನಾ, ದಕ್ಷಿಣ ಆಫ್ರಿಕಾದ ಗಣ್ಯರು ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!