ಬಿಲ್ಕಿಸ್ ಬಾನು ಪ್ರಕರಣ: ಆರೋಪಿಗಳ ಬಿಡುಗಡೆ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2002ರ ಗುಜರಾತ್ ಹಿಂಸಾಚಾರದ ಸಾಮೂಹಿಕವಾಗಿ ಅತ್ಯಾಚಾರ, ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಆರೋಪಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂಕೋರ್ಟ್ ಹಿಂದೆ ಸರಿದಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಅಜಯ್ ರಾಸ್ಟೊಗಿ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ.
ಎಲ್ಲಾ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿರುವುದು ಅರ್ಜಿದಾರರಿಗೆ ಮಾತ್ರವಲ್ಲ, ಆಕೆಯ ವಯಸ್ಸಿಗೆ ಬಂದಿರುವ ಮಗಳು, ಕುಟುಂಬ ಹಾಗೂ ಸಮಾಜಕ್ಕೂ ಆಘಾತ ಮೂಡಿಸಿದೆ ಬಾನೋ ಅರ್ಜಿಯಲ್ಲಿ ಹೇಳಿದ್ದಾರೆ.

ಪ್ರಕರಣದ11 ಮಂದಿ ಕ್ರಿಮಿನಲ್ ಗಳನ್ನು ಸರ್ಕಾರ ಬಿಡುಗಡೆ ಮಾಡಿರುವುದರ ವಿರುದ್ಧ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಆಕ್ರೋಶ, ನಿರಾಸೆ, ಅಪನಂಬಿಕೆ, ಪ್ರತಿಭಟನೆ ವ್ಯಕ್ತವಾಗಿದೆ ಎಂದು ವಕೀಲರಾದ ಶೋಭಾ ಗುಪ್ತಾ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಬಾನು ಉಲ್ಲೇಖಿಸಿದ್ದಾರೆ.

ಈ ಪ್ರಕರಣ ಕುರಿತು ಮೇ 13 ರಂದು ಅಪೆಕ್ಸ್ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬಾನು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!