ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಆದೇಶ ಹಿಂಪಡೆಯುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ವಿಶೇಷ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಬಿಲ್ಕಿಸ್ ಬಾನು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಪಿ.ಎಸ್. ನರಸಿಂಹ ಮತ್ತೆ ಜೆ.ಬಿ. ಪರ್ದಿವಾಲಾ ಅವರು ವಿಶೇಷ ಪೀಠ ರಚನೆ ಮಾಡಿ ವಿಚಾರಣೆ ನಡೆಸುವುದಾಗಿ ಮಾಹಿತಿ ದೊರಕಿದೆ.
2002 ರ ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು, ಅವರ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ಏಳು ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಇದ್ದಳು. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳು ಶಿಕ್ಷೆ ಪೂರ್ಣಗೊಳಿಸುವ ಮುನ್ನವೇ ಗುಜರಾತ್ ಸರ್ಕಾರ ಅವರನ್ನು ಸನ್ನಡತೆ ಆಧಾರದ ಮೇಲೆ ಕ್ಷಮಾದಾನ ನೀಡಿ, ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Supreme Court agrees to constitute a bench to hear pleas challenging the pre-mature release of 11 convicts who had gang-raped Bilkis Bano and murdered her family members during the 2002 Godhra riots. pic.twitter.com/I85oe2bE2B
— ANI (@ANI) March 22, 2023