ಅತ್ಯಾಚಾರ ಅಪರಾಧಿಗಳ ಬಿಡುಗಡೆ: ಆದೇಶ ಮರುಪರಿಶೀಲಿಸುವಂತೆ ಬಿಲ್ಕಿಸ್ ಬಾನು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ, ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

2002 ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿತ್ತು. ಆದರೂ ಗುಜರಾತ್ ಸರ್ಕಾರ 15 ವರ್ಷದ ಜೈಲುವಾಸದ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಗೆ ಅನುಗುಣವಾಗಿ 11 ಅಪರಾಧಿಗಳಿಗೆ ವಿನಾಯಿತಿ ನೀಡಲಾಗಿತ್ತು. ಇದೇ ವರ್ಷ ಆಗಸ್ಟ್ 15 ರಂದು ಅಪರಾಧಿಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ, ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು. 1992 ರಲ್ಲಿ ಮಾಡಿದ ನಿಯಮಗಳೇ ಸಾಮೂಹಿಕ ಅತ್ಯಾಚಾರ ಅಪರಾಧಿಗಳ ಬಿಡುಗಡೆ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ಆಧಾರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆಯಿಂದ ಓಡಿಹೋಗುವಾಗ 21 ವರ್ಷದ ಬಿಲ್ಕಿಸ್ ಬಾನು ಆಗ ಐದು ತಿಂಗಳ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!