ಬಿಲ್ಲವ ಯುವತಿಯರು, ಭಜನೆ ಬಗ್ಗೆ ಅವಹೇಳನ: ಹಿಂಜಾವೇ ಗಡುವು ಪೂರ್ಣಕ್ಕೂ ಮುನ್ನವೇ ಅರಣ್ಯಾಧಿಕಾರಿ ಪೊಲೀಸ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಬಿಲ್ಲವ ಯುವತಿಯರ ಬಗ್ಗೆ ಸಂಜೀವ ಪೂಜಾರಿ ಕೀಳು ಮಟ್ಟದ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ. ಸಂಜೀವ ಪೂಜಾರಿ ಬಂಧನಕ್ಕೆ ಶುಕ್ರವಾರ ಸಂಜೆಯವರೆಗೆ ಹಿಂಜಾವೇ ಗಡುವು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!