ಬಿಲ್ ಬೋರ್ಡ್ ದುರಂತ: ಜಾಹೀರಾತು ಕಂಪನಿಯ ಮಾಲೀಕ ಪೋಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

16 ಜನರ ಸಾವಿಗೆ ಕಾರಣವಾದ ಮುಂಬೈ ಘಾಟ್‍ಕೋಪರ್‌ ಜಾಹೀರಾತು ಫಲಕ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಭವೇಶ್ ಭಿಂಡೆ ಎಂಬ ಉದ್ಯಮಿಯನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ.

ಆರೋಪಿಯನ್ನು ಬಂಧಿಸಲು ಮುಂಬೈ ಪೊಲೀಸರು ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಿದ್ದರು. ಆರೋಪಿ ನಿರಂತರವಾಗಿ ಸ್ಥಳಗಳನ್ನು ಬದಲಾಯಿಸುತ್ತಿದ್ದರು. ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡು, ಉದಯಪುರದ ಹೋಟೆಲ್‌ನಲ್ಲಿ ತಂಗಿದ್ದರು.

ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!