Saturday, June 25, 2022

Latest Posts

ನಾಳೆಯಿಂದ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಕಾರಣದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿತ್ತು. ಇದೀಗ ಸೋಂಕು ಇಳಿಮುಖವಾಗುತ್ತಿದ್ದು, ನಾಳೆಯಿಂದ ರಾಜ್ಯ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ 19-07-2021ರಿಂದ ಪುನರಾರಂಭಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಹೀಗಾಗಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಇಲಾಖಾ ಕಚೇರಿಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಯಂತ್ರದಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಹಾಜರಾತಿಯನ್ನು ದಾಖಲಿಸುವುದು. ಆರೋಗ್ಯದ ಹಿತದೃಷ್ಠಿಯಿಂದ ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss