Friday, August 12, 2022

Latest Posts

ಪಡಿತರ ಚೀಟಿದಾರರಿಗೆ ರೇಷನ್ ಪಡೆಯಲು ಬಯೋಮೆಟ್ರಿಕ್ ಕಡ್ಡಾಯವಲ್ಲ: ರಾಜ್ಯ ಸರಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಅವಧಿಯಲ್ಲಿ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಂಚಿಕೆಯಾದ ರೇಷನ್ ವಿತರಿಸಲಾಗುತ್ತಿದೆ.
ಪಡಿತರ ವಿತರಣೆಗೆ ಬೆರಳಚ್ಚು ಪಡೆಯಲು ವಿನಾಯಿತಿ ನೀಡಲಾಗಿದ್ದು, ಬಯೋಮೆಟ್ರಿಕ್ ನಿಂದ ವಿನಾಯಿತಿ ನೀಡಲಾಗಿದ್ದು, ಪಡಿತರ ಚೀಟಿದಾರರು ಮೇ ತಿಂಗಳ ಪಡಿತರವನ್ನು ಬಯೋಮೆಟ್ರಿಕ್ ನೀಡದೆ ಪಡೆದುಕೊಳ್ಳಬಹುದಾಗಿದೆ.
ರೇಷನ್ ಕಾರ್ಡ್ ದಾರರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಹೋದ ಸಂದರ್ಭದಲ್ಲಿ ಮೊಬೈಲ್ ಗೆ ಬರುವ ಓಟಿಪಿ ಆಧರಿಸಿ ಪಡಿತರ ವಿತರಿಸಲಾಗುತ್ತದೆ. ಮ್ಯಾನುಯೆಲ್ ಮೂಲಕವೂ ಪಡಿತರ ವಿತರಣೆ ಮಾಡಲಾಗುವುದು. ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss