ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತ ಅಬ್ಬರಿಸುತ್ತಿದ್ದು,ಇಲ್ಲಿನ ಕಛ್ ಜಿಲ್ಲೆಯ ಜಖಾವು ಬಂದರಿಗೆ ಚಂಡಮಾರುತ ಅಪ್ಫಳಿಸಲಿದೆ.
ಸುಮಾರು 100 ರಿಂದ 150 ಕಿಲೋಮೀಟರ್ ವೇಗದಲ್ಲಿ ಸ್ಲೈಕ್ಲೋನ್ ಅಪ್ಪಳಸಲಿದೆ ಎಂದು ವರದಿಗಳು ಹೇಳುತ್ತಿದೆ. ಈಗಾಗಲೇ ಗುಜರಾತ್ ತೀರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.
ಈಗಾಗಲೇ 1 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಸದ್ಯ 100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹಲೆವೆಡೆ ಭಾರಿ ಮಳೆಯಾಗುತ್ತಿದೆ.
ಬಿಪೊರ್‌ಜಾಯ್ ಚಂಡಮಾರುತ ವಾಯವ್ಯ ಭಾಗದತ್ತ ಮುನ್ನುಗ್ಗುತ್ತಿದ್ದು, ಗಂಟೆಗೆ 150 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಇಂದು ಜಖಾವು ಬಂದರಿಗೆ ಅಪ್ಪಳಿಸಲಿದೆ’ ಎಂದು ಹವಾಮಾನ ಇಲಾಖೆ ಹೇಳಿದೆ.
ಇತ್ತ ಚಂಡಮಾರುತದ ಭೂಕುಸಿತ ಪ್ರಕ್ರಿಯೆಯು ಗುಜರಾತ್’ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಪ್ರಾರಂಭವಾಗಿದ್ದು, ಮಧ್ಯರಾತ್ರಿಯವರೆಗೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆತಿಳಿಸಿದೆ.
ಚಂಡಮಾರುತ ಅಬ್ಬರಿಸುತ್ತಿರುವ ಕಾರಣ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು, ‘ಎಲ್ಲ ಸೇನಾಪಡೆಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ರಕ್ಷಣೆಗೆ ಧಾವಿಸಬೇಕು’ ಎಂದು ಮೂರೂ ರಕ್ಷಣಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಇದರ ಬೆನ್ನನ್ನೇ ಸೇನೆ, ನೌಕಾಪಡೆ ಹಾಗೂ ಬಿಎಸ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ.
18 ಎನ್ಡಿಆರ್ಎಫ್ ತಂಡಗಳು, 12 ಎಸ್ಡಿಆರ್ಎಫ್, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರದ ತಂಡಗಳು, 397 ವಿದ್ಯುತ್ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ಈಗಾಗಲೇ ಹಲವು ಭಾಗಗಳಲ್ಲಿ ಬಿರುಗಾಳಿ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಅಲ್ಲಿ ವಿದ್ಯುತ್ ಇಲಾಖೆ ತಂಡಗಳು ಮರು ವಿದ್ಯುತ್ ಸಂಪರ್ಕಕ್ಕೆ ಶ್ರಮಿಸುತ್ತಿವೆ. ಮೊಬೈಲ್ ಹಾಗೂ ಸ್ಥಿರ ದೂರವಾಣಿ ಸಂಪರ್ಕ ವ್ಯತ್ಯಯ ಆಗುವ ಸಾಧ್ಯತೆ ಇದೆ. ಹೀಗಾಗಿ ಸ್ಯಾಟಲೈಟ್ ಫೋನ್ಗಳನ್ನು ರಕ್ಷಣಾ ತಂಡಗಳಿಗೆ ನೀಡಲಾಗಿದೆ.