ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ: 8000 ಕೋಳಿಗಳನ್ನು ಕೊಲ್ಲಲು ಆದೇಶ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಹೀಗಾಗಿ ಇಲ್ಲಿನ ಒಂದು ಕಿಮೀ ವ್ಯಾಪ್ತಿಯಲ್ಲಿ ಸುಮಾರು 8,000 ಬಾತುಕೋಳಿಗಳು, ಕೋಳಿಗಳು ಮತ್ತು ಇತರ ದೇಶೀಯ ಪಕ್ಷಿಗಳನ್ನು ಕೊಲ್ಲಲು ಅಧಿಕಾರಿಗಳು ಆದೇಶಿಸಿದ್ದಾರೆ.

ಕೊಟ್ಟಾಯಂ ಜಿಲ್ಲೆಯ ಅರ್ಪೂಕರ & ತಾಳಯಾಳಂ ಪಂಚಾಯಿತ್ ನ ಸುತ್ತಮುತ್ತ ಪ್ರದೇಶದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಪಿ.ಕೆ.ಜಯಶ್ರೀ ತುರ್ತು ಸಭೆ ನಡೆಸಿದ್ದು, ಹೀಗಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪಶುಸಂಗೋಪನಾ ಇಲಾಖೆಗೆ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಪಕ್ಷಿಗಳನ್ನು ಕೊಲ್ಲಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಅದೇ ರೀತಿ ಡಿಸೆಂಬರ್ 13 ರಿಂದ ಮೂರು ದಿನಗಳ ಕಾಲ ಹಕ್ಕಿ ಜ್ವರ ಕಾಣಿಸಿಕೊಂಡ ಪ್ರದೇಶದ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ, ಬಾತುಕೋಳಿ, ಇತರ ಸಾಕು ಪಕ್ಷಿಗಳು, ಮೊಟ್ಟೆ, ಮಾಂಸ, ಗೊಬ್ಬರ ಮತ್ತು ಇತರ ಸಂಬಂಧಿತ ಉತ್ಪನ್ನಗಳ ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!