ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ: 1,800 ಕೋಳಿಗಳು ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳದ ಕೋಝಿಕೋಡ್ ಜಿಲ್ಲೆಯ ಸರ್ಕಾರಿ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಸುಮಾರು 1,800 ಕೋಳಿಗಳು ಹಕ್ಕಿ ಜ್ವರದ ಸೋಂಕಿನಿಂದ ಸಾವನ್ನಪ್ಪಿವೆ.

ಈ ನಿಟ್ಟಿನಲ್ಲಿ ಕೇಂದ್ರದ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್ ಪ್ರಕಾರ ಹಕ್ಕಿ ಜ್ವರದ ಸೋಂಕನ್ನು ತುರ್ತಾಗಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ಪಶುಸಂಗೋಪನೆ ಸಚಿವರಾದ ಜೆ. ಚಿಂಚು ರಾಣಿ ಸೂಚನೆ ನೀಡಿದ್ದಾರೆ.

ಕೋಳಿಗಳ ಮಾದರಿಗಳನ್ನು ಭೋಪಾಲ್​ನಲ್ಲಿರುವ ಹೈ ಸೆಕ್ಯುರಿಟಿ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಇದರಲ್ಲಿ ಏವಿಯನ್ ಇನ್ಫ್ಲುಯೆನ್ಸ ದೃಢಪಟ್ಟಿದೆ ಎಂದು ಕೇರಳ ಸರ್ಕಾರದ ಹೇಳಿಕೆ ತಿಳಿಸಿದೆ. ಕೋಳಿ ಫಾರ್ಮ್‌ನಲ್ಲಿ 5,000ಕ್ಕೂ ಹೆಚ್ಚು ಕೋಳಿಗಳಿದ್ದು, ಅವುಗಳಲ್ಲಿ 1,800 ಕೋಳಿಗಳು ಸೋಂಕಿನಿಂದ ಸಾವನ್ನಪ್ಪಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!