ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ಪತ್ತೆ: ಕೋಳಿಗಳನ್ನು ಕೊಲ್ಲಲು ಸರ್ಕಾರ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇರಳದ ಆಲಪ್ಪುಳ ಜಿಲ್ಲೆಯ ವಿವಿಧೆಡೆ ಹಕ್ಕಿ ಜ್ವರ ಗೋಚರಿಸಿದ್ದು, ಈ ಹಿನ್ನೆಲೆ ಕೋಳಿಗಳನ್ನು ನಾಶಪಡಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಆಲಪ್ಪುಳ ಜಿಲ್ಲೆಯ 2ಗ್ರಾಮ ಪಂಚಾಯಿತಿಗಳಲ್ಲಿ ಏವಿಯನ್ ಇನ್ಫ್ಲುಯೆನ್ಸ(ಎಚ್5ಎನ್1) ಪಾಸಿಟಿವ್ ಕಂಡುಬಂದಿದೆ. ಬಾತುಕೋಳಿಗಳ ಮಾದರಿ ಪರೀಕ್ಷಿಸಿದ ನಂತರ ಹಕ್ಕಿ ಜ್ವರ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಡತ್ವ ಪಂಚಾಯತ್‌ನ ವಾರ್ಡ್ 1 ವಿಲಕ್ಕುಮಾರಂ ಕೋಳಿಫಾರಂ, ಮತ್ತು ಚೆರುತನ ಪಂಚಾಯಿತಿಯ ವಾರ್ಡ್ 3 ರಲ್ಲಿ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ತರಹದ ಲಕ್ಷಣಗಳು ಕಂಡುಬಂದ ನಂತರ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ಲ್ಯಾಬ್‌ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮಾದರಿಗಳು ಎಚ್5ಎನ್1 ಪಾಸಿಟಿವ್ ಎಂದು ಪರೀಕ್ಷಾ ವರದಿಗಳು ದೃಢಪಡಿಸಿವೆ. ಬಳಿಕ ಹಕ್ಕಿ ಜ್ವರ ಹತೋಟಿಗೆ ಸಮಗ್ರ ಕ್ರಿಯಾ ಯೋಜನೆಯನ್ನು ಸರ್ಕಾರ ರೂಪಿಸಿದೆ.

ಪ್ರಾರಂಭದಲ್ಲಿ ರೋಗ ಕಾಣಿಸಿಕೊಂಡ 1ಕಿಮೀ ವ್ಯಾಪ್ತಿಯಲ್ಲಿ ಕೋಳಿಗಳನ್ನು ಕೊಲ್ಲುವ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪಶುಪಾಲನಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಕ್ಷಿಪ್ರ ಕ್ರಿಯಾ ಪಡೆ ರಚಿಸಲಾಗಿದೆ.

ಇನ್ನು ರಾಜ್ಯ ಸರ್ಕಾರ ಭಯಭೀತರಾಗದಂತೆ ಜನರಲ್ಲಿ ಮನವಿ ಮಾಡಿದೆ. ಮನುಷ್ಯರಲ್ಲಿ ಹಕ್ಕಿಜ್ವರ ಪ್ರಸರಣದ ಸಾಧ್ಯತೆ ಕಡಿಮೆ ಎಂದು ಸರ್ಕಾರ ಭರವಸೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!