ಹೆಚ್ಚಿದ ಹಕ್ಕಿಜ್ವರ: ಕೇರಳದ ಕೊಟ್ಟಾಯಂನಲ್ಲಿ 6,000 ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಉಲ್ಭಣಗೊಳ್ಳುತ್ತಿದ್ದು, ಅಲ್ಲಿನ ಮೂರು ಪ್ರತ್ಯೇಕ ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ದೃಢಪಟ್ಟ 6,000 ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ.
ಜಿಲ್ಲೆಯ ವೇಚೂರು, ನೀಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ 6,017 ಪಕ್ಷಿಗಳು, ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಕೊಂದುಹಾಕಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಬರ್ಡ್ ಫ್ಲೂ ಅಥವಾ ಏವಿಯನ್ ಇನ್ಫ್ಲುಯೆನ್ಸ್ ಸಾಂಕ್ರಾಮಿಕ ಝೂನೋಟಿಕ್ ಕಾಯಿಲೆಯಾಗಿದೆ.
ಏತನ್ಮಧ್ಯೆ, ಇದೀಗ ಕೇರಳದಲ್ಲಿ ಹಕ್ಕಿಜ್ವರದ ಹರಡುವಿಕೆಯ ವರದಿಯಿಂದಾಗಿ ಲಕ್ಷದ್ವೀಪ ಆಡಳಿತವು ಕೇರಳದ ಮುಖ್ಯ ಭೂಭಾಗದಿಂದ ದ್ವೀಪಗಳಿಗೆ ಕೋಳಿಯನ್ನು ಸಾಗಿಸುವುದನ್ನು ನಿಷೇಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!