ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ರಾಜ್ಯಾದ್ಯಂತ ಹಕ್ಕಿಗಳು ಏಕಾಏಕಿ ಸಾವನ್ನಪ್ಪುತ್ತಿವೆ.
ವಟಗುಟ್ಲ, ಗುಲ್ಲಮ್ಮಲಡಿಬ್ಬದಲ್ಲಿ ಸಾವಿರಾರು ಕೋಳಿಗಳು ಮೃತಪಟ್ಟಿದ್ದು, ತಕ್ಷಣವೇ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷೆ ನಂತರ ಹಕ್ಕಿಗಳು ಜ್ವರದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.
ಹಕ್ಕಿಜ್ವರದಿಂದ ಸುತ್ತಮುತ್ತ ಪ್ರದೇಶದಲ್ಲಿ ಕೋಳಿ ಸಾಕಾಣಿಕೆ ಹಾಗೂ ಮಾರಾಟಕ್ಕೆ ನಿರ್ಬಂಧ ಹಾಕಲಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋಳಿ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಮನೆಯಲ್ಲಿಯೂ ಚಿಕನ್ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ. ಮೂರು ತಿಂಗಳ ಕಾಲ ಮಾರಾಟಕ್ಕೆ ನಿಷೇಧ ಹೇರಿದ್ದು, ನಂತರ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ಆಲೋಚಿಸಲಾಗುತ್ತದೆ.