June 2, 2026
Tuesday, June 2, 2026
spot_img

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ: ತೀವ್ರ ನಿಗಾ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದ್ದು, ಈ ಹಿನ್ನೆಲೆ ತೀವ್ರ ನಿಗಾ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ತುಮಕೂರು ಜಿಲ್ಲೆಯಲ್ಲಿ ಮೃತಪಟ್ಟಿದ್ದ ನವಿಲುಗಳಿಗೆ ಹಕ್ಕಿ ಜ್ವರ ತಗುಲಿರುವುದು ದೃಢಪಟ್ಟಿತ್ತು.

ಈ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಅರಣ್ಯ ಇಲಾಖೆ, ರಾಜ್ಯದ ಎಲ್ಲಾ ಮೃಗಾಲಯಗಳು, ಪಕ್ಷಿಧಾಮಗಳು ಹಾಗೂ ಅರಣ್ಯ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಿದ್ದಾರೆ.

ಅದರಲ್ಲೂ ಧಾರವಾಡದ ಮಾಗಡಿ ಕೆರೆ ಮತ್ತು ಕೊಕ್ಕರೆ ಬೆಳ್ಳೂರು ಸಮುದಾಯ ಮೀಸಲು ಪ್ರದೇಶ ಸೇರಿದಂತೆ ಪ್ರಮುಖ ಪಕ್ಷಿ ಸಂಕುಲದ ತಾಣಗಳ ಮೇಲೆ ಹೆಚ್ಚಿನ ನಿಗಾ ಇರಿಸಲು ಖಂಡ್ರೆ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪರಿಷ್ಕೃತ H5N1 ಕ್ರಿಯಾಯೋಜನೆಯಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪಕ್ಷಿಗಳು ಮೃತಪಟ್ಟರೆ ತಕ್ಷಣ ವರದಿ ಮಾಡಿ, ದೇಹದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !