BIG NEWS | ವಿಮಾನಕ್ಕೆ ಹಕ್ಕಿ ಡಿಕ್ಕಿ, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಷ್ಪರ್ಶ ಮಾಡಲಾಗಿದೆ. ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿ ಡಿಕ್ಕಿಯಾಗಿದೆ. ಇದರಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಪರಿಸ್ಥಿತಿ ಘೋಷಿಸಲಾಗಿದೆ.

ಹಕ್ಕಿ ಡಿಕ್ಕಿಯಾಗಿಉವ ಫೆಡೆಕ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಆಗಿದೆಯೇ, ಇನ್ನಿತರ ವಿಮಾನಗಳ ಹಾರಾಟಕ್ಕೆ ಪಕ್ಷಿಗಳು ಅಡ್ಡಿಯಾಗಬಹುದೇ ಎಂದು ಪರಿಶೀಲಿಸುವ ಸಲುವಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇದರಿಂದಾಗಿ ಉಳಿದ ವಿಮಾನಗಳ ಹಾರಾಟವೂ ಸ್ಥಗಿತಗೊಂಡಿದ್ದು, ಪ್ರಯಾಣಿಕರು ನಿಲ್ದಾಣದಲ್ಲಿಯೇ ಉಳಿದಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!