ಅಕ್ಟೋಬರ್ 1ರಿಂದ ಜನನ ಪ್ರಮಾಣ ಪತ್ರ ಕಡ್ಡಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಕ್ಟೋಬರ್ 1 ರಿಂದ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಗೃಹ ಇಲಾಖೆಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಈ ಮಾಹಿತಿ ನೀಡಿದ್ದಾರೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡಿಕೆ, ಮತದಾರರ ಪಟ್ಟಿ ಸಿದ್ಧಪಡಿಸುವುದು, ಆಧಾರ್ ಸಂಖ್ಯೆ, ಮದುವೆ ನೋಂದಣಿ ಅಥವಾ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಮುಂತಾದ ಹಲವಾರು ಉದ್ದೇಶಗಳಿಗಾಗಿ ಜನನ ಪ್ರಮಾಣಪತ್ರವನ್ನು (Birth Certificate) ಒಂದೇ ದಾಖಲೆಯಾಗಿ ಬಳಸಲು ಈ ಕಾನೂನು ಅನುಮತಿಸುತ್ತದೆ.

ಮತದಾರ ಪಟ್ಟಿಯೊಂದಿಗೆ ಜನನ/ಮರಣ ಮಾಹಿತಿ ಜೋಡಣೆಯಿಂದ ವೋಟರ್ ಲಿಸ್ಟ್ ಪರಿಷ್ಕರಣೆ ಸ್ವಯಂಚಾಲಿತವಾಗಲಿದೆ. 18 ವರ್ಷ ವಯಸ್ಸು ತುಂಬುತ್ತಲೇ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಮಾಡಿಸಿಕೊಳ್ಳುವಂತೆ ಚುನಾವಣಾ ಆಯೋಗದ ಕಡೆಯಿಂದ ಸೂಚನೆ ಬರಲಿದೆ. ಅದೇ ರೀತಿ ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ, ಚುನಾವಣಾ ಆಯೋಗವು ತಾನೇ ಆ ವ್ಯಕ್ತಿಯ ಹೆಸರನ್ನು ಮತದಾರ ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಆದರೆ ಇದಕ್ಕೂ ಮುನ್ನ ಆ ವ್ಯಕ್ತಿಯ ಕುಟುಂಬದ ಸದಸ್ಯರಿಗೆ 15 ದಿನದೊಳಗೆ ಮರಣದ ವಿಷಯವನ್ನು ದೃಢಪಡಿಸಬೇಕಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!