ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾನ್ ಇಂಡಿಯಾ ಸ್ಟಾರ್ ಯಶ್‌ಗೆ ಇಂದು ಜನ್ಮದಿನದ ಸಂಭ್ರಮ.
36 ನೇ ವಸಂತಕ್ಕೆ ಕಾಲಿಟ್ಟ ನಟನಿಗೆ ಎಲ್ಲೆಡೆಯಿಂದ ಪ್ರೀತಿಯ ಶುಭಾಶಯಗಳು ಹರಿದು ಬರುತ್ತಿವೆ.
ಕೊರೋನಾದಿಂದ ಕಳೆದ ವರ್ಷವೂ ಯಶ್ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿರಲಿಲ್ಲ. ಈ ವರ್ಷ ಕೂಡ ಅದೇ ಪರಿಸ್ಥಿತಿ ಎದುರಾಗಿದ್ದು, ಸಾರ್ವಜನಿಕರಿಗೆ ಯಾರೂ ಮನೆಯ ಬಳಿ ಬಾರದಂತೆ ಮನವಿ ಮಾಡಿದ್ದಾರೆ.
ಎಲ್ಲಿರುತ್ತೀರೋ ಅಲ್ಲಿಂದಲೇ ಹರಸಿ ಎಂದು ಯಶ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಹುಟ್ಟುಹಬ್ಬಕ್ಕೆ ಸಾಕಷ್ಟು ಸಿನಿ ಗಣ್ಯರು ಶುಭ ಕೋರಿದ್ದಾರೆ. ಇದೇ ಸಂದರ್ಭದಲ್ಲಿ ಯಶ್ ಅಭಿನಯದ ಕೆಜಿಎಫ್-2 ಸಿನಿಮಾದಿಂದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ವಿಜಯ್ ಕಿರಗಂದುರ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ.