Tuesday, October 3, 2023

Latest Posts

ಸಿ.ಎಂ.ಬಸವರಾಜ್ ಬೊಮ್ಮಾಯಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಗಣ್ಯರು

ಹೊಸ ದಿಗಂತ ವರದಿ, ಬಳ್ಳಾರಿ:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬೂಡಾ ಅಧ್ಯಕ್ಷ ಕಾರ್ಕಲತೋಟ ಪಾಲನ್ನ ಸೇರಿದಂತೆ ವಿವಿಧ ಗಣ್ಯರು ಶುಕ್ರವಾರ ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದರು. ಬೆಂಗಳೂರು ನಗರದಲ್ಲಿ ಸಿ.ಎಂ.ಬೊಮ್ಮಾಯಿ ಅವರನ್ನು ಭೇಟಿ‌ ಮಾಡಿದ ಗಣ್ಯರು, ಹೂ ಗುಚ್ಛ ನೀಡಿ ಜನ್ಮದಿನದ ಶುಭಾಷಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ನಾಯಕರು ಸಿ.ಎಂ.ಅವರೊಂದಿಗೆ ಚೆರ್ಚಿಸಿ, ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಖಾತೆ ಸಚಿವ ಆರ್.ಅಶೋಕ್, ಸಚಿವ ಭೈರತಿ ಬಸವರಾಜ್, ಬಳ್ಳಾರಿ ‌ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಕಾರ್ಕಲತೋಟ ಪಾಲನ್ನ, ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ, ಪಾಲಿಕೆ ಮಾಜಿ ಸದಸ್ಯ ಎಸ್.ಮಲ್ಲನಗೌಡ, ರಾಜು ಮುತ್ತಗಿ, ಕೃಷ್ಣಾ ರೆಡ್ಡಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!