Sunday, August 14, 2022

Latest Posts

ಇಂದು ಡಿ.ವಿ.ಸದಾನಂದ ಗೌಡರ ಜನ್ಮದಿನ: ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿದಂತೆ ಗಣ್ಯರಿಂದ ಶುಭಾಶಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿದಂತೆ ರಾಜಕೀಯ ಗಣ್ಯರು ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಡಿ.ವಿ.ಸದಾನಂದ ಗೌಡರ ಜನ್ಮ ದಿನಕ್ಕೆ ಶುಭಾಷಯ ತಿಳಿಸಿದ್ದಾರೆ. ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ  ಸದಾನಂದ ಗೌಡರ ಪಾತ್ರವೂ ದೊಡ್ಡದಿದೆ. ರಾಸಾಯನಿಕಗಳು ಮತ್ತು ರಸಗೊಬ್ಬರ ಕ್ಷೇತ್ರಗಳ ಅಭಿವೃದ್ಧಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ದೀರ್ಘ ಆಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಹಿರಿಯ ನಾಯಕರು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಆತ್ಮೀಯರೂ ಆದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss