ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ: ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಬಿ.ಸಿ.ನಾಗೇಶ್

ಹೊಸ ದಿಗಂತ ವರದಿ,ಮಡಿಕೇರಿ:

ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನವನ್ನು ಜಿಲ್ಲಾಡಳಿತ ವತಿಯಿಂದ ಗುರುವಾರ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ(ಸನ್ನಿಸೈಡ್)ದಲ್ಲಿ ಆಚರಿಸಲಾಯಿತು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ವೀಕ್ಷಿಸಿದರು.
ಬಳಿಕ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಎದುರು ಜನರಲ್ ತಿಮ್ಮಯ್ಯ ಅವರ ಮ್ಯೂಸಿಯಂನ ವಿಷಯಗಳನ್ನೊಳಗೊಂಡ ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 116 ನೇ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಚಿವ ಬಿ.ಸಿ.ನಾಗೇಶ್ ಅವರು ಬಹುಮಾನ ವಿತರಣೆ ಮಾಡಿದರು.
ನಂತರ ಸ್ಮಾರಕ ಭವನದ ಹತ್ತಿರ ಹೊಸದಾಗಿ ನಿರ್ಮಿತವಾದ ‘ಬ್ಲಾಸಂಕೆಫೆ’ಯನ್ನು ಸಚಿವರು ಉದ್ಘಾಟಿಸಿದರು.
ಈ ಸಂದರ್ಭ ಮಾಜಿ ಸಚಿವ ಎಂ.ಸಿ.ನಾಣಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಸೇರಿದಂತೆ ಮಾಜಿ ಸೈನಿಕರು, ಅಧಿಕಾರಿಗಳು ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!