ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಹೀರೋ ಅಕ್ಷಯ್ ಕುಮಾರ್ ಇಂದು ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅಕ್ಷಯ್ ತಮ್ಮ ಪುತ್ರ ಆರವ್ ಜೊತೆಗೆ ಉಜ್ಜಯಿನಿಯ ಪುರಾತನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು. ಅದಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ದೇವಾಲಯದ ಆವರಣದಲ್ಲಿ ಅಕ್ಷಯ್ ಪ್ರಾರ್ಥನೆ ಸಲ್ಲಿಸುತ್ತಿದ್ದು, ಈ ಫೋಟೋಗಳಲ್ಲಿ ಭಾರತದ ಕ್ರಿಕೆಟಿಗ ಶಿಖರ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ.
ನಟ ಇತ್ತೀಚೆಗೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೂ ಭೇಟಿ ನೀಡಿದ್ದರು. ಬಾಲಿವುಡ್ ಸೆಲೆಬ್ರಿಟಿಗಳು ಅಕ್ಷಯ್ ಕುಮಾರ್ ಬರ್ತಡೇಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಚರಿಸುತ್ತಿದ್ದಾರೆ.
ಚಲನಚಿತ್ರಗಳಿಗೆ ಸಂಬಂಧಿಸಿದಂತೆ, ಅಕ್ಷಯ್ ಇತ್ತೀಚೆಗೆ OMG 2 ನಲ್ಲಿ ಪಂಕಜ್ ತ್ರಿಪಾಠಿಯೊಂದಿಗೆ ನಟಿಸಿದ್ದಾರೆ. ಅಮಿತ್ ರಾಯ್ ನಿರ್ದೇಶನದ ಈ ಚಿತ್ರದಲ್ಲಿ ಯಾಮಿ ಗೌತಮ್ ಮತ್ತು ಅರುಣ್ ಗೋವಿಲ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.