ಶಾಲೆಯಲ್ಲಿ ಬಿಸಿಯೂಟ ಸೇವೆನೆ: 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಧೋರನಹಳ್ಳಿಯ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಖಾಸಗಿ ಏಜೆನ್ಸಿ ವತಿಯಿಂದ ಸರಬರಾಜು ಮಾಡಿದ ಆಹಾರವನ್ನು ಮಕ್ಕಳು ಸೇವಿಸಿದ್ದರಿಂದ ಈ ಘಟನೆ ಸಂಭವಿಸಿದೆ.

ನಾಲ್ಕು ಶಾಲೆಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲುತ್ತಿದ್ದು, ಅಸ್ವಸ್ಥ ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!