ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೈಕೋರ್ಟ್

ಬಿಟ್ ಕಾಯಿನ್ ಪ್ರಕರಣ (Bitcoin Case) ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿ ಹೈಕೋರ್ಟ್ (Karnataka High Court) ತಾತ್ಕಾಲಿಕ ರಿಲೀಫ್ ನೀಡಿದೆ.

ಮುಂದಿನ ದಿನಾಂಕದವರೆಗೆ ಕೋರ್ಟ್​ಗೆ ಖುದ್ದು ಹಾಜರಿಯಿಂದ‌ ವಿನಾಯಿತಿ ನೀಡಿದ ಏಕಸದಸ್ಯ ಪೀಠ, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.

ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್​ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್​ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ವಾದ ,ಪ್ರತಿವಾದ ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸಾಕ್ಷಾಧಾರವಿಲ್ಲದೇ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!