ಬಿಟ್ ಕಾಯಿನ್ ಕೇಸ್‍: ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಗೆ ಎಸ್‍ಐಟಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಟ್ ಕಾಯಿನ್ ಕೇಸ್‍ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ.

ನಲಪಾಡ್ ವಿರುದ್ಧ ಶ್ರೀಕಿ (Shriki) ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ.

ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‍ಐಟಿ ಆರೋಪಿ ಎಂದು ಪರಿಗಣಿಸಿದ್ದು, ನೋಟಿಸ್ ನೀಡಿದೆ.

ಫೆ.7ರಂದು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್‌ನಲ್ಲಿ ಉಲ್ಲೇಖಿಸಿದೆ. ಈ ಹಿಂದೆ ಹೇಳಿಕೆ ದಾಖಲು ಮಾಡಿದ್ದು,ಶ್ರೀಕಿ ಜೊತೆಗೆ ಕೋಟ್ಯಾಂತರ ರೂ. ವ್ಯವಹಾರ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!