Monday, August 15, 2022

Latest Posts

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಸಾಕ್ಷ್ಯನೀಡಲಿ: ಮಾಜಿ ಸಿಎಂ ಜಗದೀಶ ಶೆಟ್ಟರ್

ಹೊಸ ದಿಗಂತ ವರದಿ, ಹುಬ್ಬಳ್ಳಿ:

ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಸಾಕ್ಷಿಗಳು ಮತ್ತು ಮಾಹಿತಿ ಇದ್ದರೆ ನೀಡಲಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಈ ವಿಚಾರವಾಗಿ ಊಹಾಪೋಹ ಮಾಡುತ್ತಿರುವುದು ಸರಿ ಅಲ್ಲ. ಈಗಾಗಲೇ ಇಡಿ ಮತ್ತು ಸಿಬಿಐ ತನಿಖೆಗೆ ನೀಡಲಾಗಿದೆ ಎಂದರು.
ಹೊಸದಾಗಿ ನಾಯಕತ್ವ ವಹಿಸಿಕೊಂಡರೂ ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಇನ್ನಷ್ಟು ಯಶಸ್ವಿಯಾಗಿ ಸರ್ಕಾರ ನಡೆಸಲಿ ಎಂದು ಹಾರೈಸಿದರು.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಮಧ್ಯಮ ಮತ್ತು ಬಡವರಿಗೆ ಸಾಕಷ್ಟು ತೊಂದರೆಯಾಗಿತ್ತು. ಬೆಲೆ ಏರಿಕೆಯಿಂದ ಇತರ ತೊಂದರೆಗಳು ಉಂಟಾಗಿದ್ದವು. ಬೆಲೆ ಇಳಿಕೆ ಮಾಡಬೇಕೆಂಬ ಬೇಡಿಕೆ ಇತ್ತು. ಪ್ರತಿ ಲೀಟರ್ ಪೆಟ್ರೋಲ್‌ಗೆ 5, ಡೀಸೆಲ್ ಗೆ 10 ರೂಪಾಯಿ ಇಳಿಕೆ ಮಾಡಿ ಪ್ರಧಾನಿ ಜನರಿಗೆ ದೀಪಾವಳಿ ಉಡುಗೊರೆ ನೀಡಿದ್ದಾರೆ ಎಂದರು.
ಕೇಂದ್ರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಕಡಿಮೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್ ಮೇಲೆ 7, ಡೀಸೆಲ್ ಮೇಲೆ 7 ರೂ ಕಡಿಮೆ ಮಾಡಿ ನಾಗರಿಕರಿಗೆ ಅನುಕೂಲ ಮಾಡಿ ಕೊಟ್ಟಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss