ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಚಳ್ಳಕೆರೆ-ಹಿರಿಯೂರ ಮಾರ್ಗ ಮಧ್ಯದ ಆರ್.ಕೆ.ಪವರ್ ಜಿನ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ಚಲಿಸುತ್ತಿದ್ದ ಲಾರಿಗೆ ಮಿನಿ ಟ್ರಕ್ ಡಿಕ್ಕಿ ಶಿವಲಿಂಗ (65), ರಮೇಶ್ (55) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಇಬ್ಬರು ಶಿವಲಿಂಗ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದವರು. ಚಳ್ಳಕೆರೆಯಿಂದ ಹಿರಿಯೂರಿಗೆ ಕುರಿ ವ್ಯಾಪಾರಕ್ಕೆ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಇಬ್ಬರೂ ಕುರಿ ವ್ಯಾಪಾರಿಗಳು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.