ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ತೆಲಂಗಾಣ ಶಾಸಕ ರಾಜಾ ಸಿಂಗ್ ಅವರು ಸಲ್ಲಿಸಿದ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ.

ತೆಲಂಗಾಣ ಶಾಸಕ ಟಿ. ರಾಜಾ ಸಿಂಗ್ ಅವರು ಜೂ.30 ರಂದು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ರಾಜೀನಾಮೆ ಪತ್ರದಲ್ಲಿ ಶಾಸಕ ಉಲ್ಲೇಖಿಸಿದ್ದ ಕಾರಣಗಳನ್ನು ಬಿಜೆಪಿ ತಿರಸ್ಕರಿಸಿದೆ.

ಈ ಕುರಿತು ಬಿಜೆಪಿ ಹೈಕಮಾಂಡ್ ಶಾಸಕ ರಾಜಾ ಸಿಂಗ್ ಪತ್ರವೊಂದನ್ನು ಕೂಡ ಬರೆದಿದ್ದು, ಅಲ್ಲಿ ರಾಜಿನಾಮೆ ಅಂಗೀಕಾರದ ಕುರಿತು ಮಾಹಿತಿ ನೀಡಿದೆ.

ನಮಸ್ಕಾರ, ಇದು ಬಿಜೆಪಿ ತೆಲಂಗಾಣ ರಾಜ್ಯ ಅಧ್ಯಕ್ಷರಾದ ಜಿ. ಕಿಶನ್ ರೆಡ್ಡಿ ಅವರಿಗೆ ನೀವು ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಜೂನ್ 30, 2025 ರಂದು ಬರೆದ ಪತ್ರ ಸಂಖ್ಯೆ 1041 ರ ಉಲ್ಲೇಖವಾಗಿದೆ. ಮೇಲೆ ತಿಳಿಸಲಾದ ಪತ್ರವನ್ನು ಗೌರವಾನ್ವಿತ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರ ಗಮನಕ್ಕೆ ತರಲಾಗಿದೆ ಎಂದು ಪತ್ರದಲ್ಲಿ ಹೇಳಿದೆ.

‘ನೀವು ಉಲ್ಲೇಖಿಸಿರುವ ವಿಷಯಗಳು ಅಪ್ರಸ್ತುತ ಮತ್ತು ಪಕ್ಷದ ಕಾರ್ಯವೈಖರಿ, ಸಿದ್ಧಾಂತ ಮತ್ತು ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ. ಗೌರವಾನ್ವಿತ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರ ನಿರ್ದೇಶನದ ಪ್ರಕಾರ, ನಿಮ್ಮ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ ಎಂದು ನಾನು ತಿಳಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ರಾಜಾ ಸಿಂಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!