ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರು ಸಂಘಟಿತರಾಗಬೇಕು: ಹೇಮಾನಂದೀಶ್

 ಹೊಸ ದಿಗಂತ ವರದಿ, ಮೈಸೂರು:

ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆಯು ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮೈಸೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾನಂದೀಶ್ ಮಾತನಾಡಿ, ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಮಹಿಳೆಯರು ಹೆಚ್ಚು ಸಂಘಟಿತರಾಗಬೇಕು. ತಳಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸರಿಯಾದ ಮಾಹಿತಿಗಳನ್ನು ಜನರಿಗೆ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ತಲುಪಿಸಬೇಕು. ಮುಂಬರುವ ಚುನಾವಣೆಯಲ್ಲಿ ನಾಲ್ಕು ಮಂಡಲಗಳಲ್ಲಿ ಬಿಜೆಪಿ ಒಐಂ ಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಬೇಕು.ಭಾರತೀಯ ಜನತಾ ಪಕ್ಷಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ವತಿಯಿಂದ ಉದ್ಯಮಿ ಸ್ವಾತಿ ಭಗವತಿಗೆ ಅಭಿನಂದಿಸಲಾಯಿತು.
ಸಭೆಯ 2 ನೇ ಅವಧಿಯಲ್ಲಿ ಕೆ.ಪಿ.ಮಧುಸೂಧನ್ ಅವರು, ಸರ್ಕಾರದ ಕಾರ್ಯ ಯೋಜನೆಗಳನ್ನು ಹೇಗೆ ಮಹಿಳೆಯರು ಉಪಯೋಗಿಸಿಕೊಳ್ಳಬೇಕು ಎಂದು ಎಲ್ಲಾ ಸಂಪೂರ್ಣ ಮಾಹಿತಿಯನ್ನು ಮಹಿಳೆಯರಿಗೆ ನೀಡಿದರು.
ಸಭೆಯಲ್ಲಿ ಮೈಸೂರು ನಗರಪಾಲಿಕೆಯ ಉಪ ಮೇಯರ್ ರೂಪಾ, ಮೈಸೂರು ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾದ ಪ್ರಭಾರಿ ಗೋಪಾಲ್ ರಾಜೆ ಅರಸ್, ಮೈಸೂರು ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಕಿರಣ್ ಗೌಡ, ವೇದಾವತಿ, ಪ್ರಮೀಳಾ ಭರತ್, ಸರಸ್ವತಿ ಪ್ರಸಾದ್, ರೇಣುಕ ರಾಜು, ನಾಗರತ್ನ ಗೌಡ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!