ತಮಿಳುನಾಡಿನಲ್ಲಿ ಮತ್ತೆ ಒಂದಾದ ಬಿಜೆಪಿ-ಎಐಎಡಿಎಂಕೆ: ಎಡಪ್ಪಾಡಿ ಪಳನಿಸ್ವಾಮಿ ಸಿಎಂ ಅಭ್ಯರ್ಥಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಮತ್ತೆ ಮೈತ್ರಿ ಮಾಡಿಕೊಂಡಿವೆ ಎಂದು ಚೆನ್ನೈನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಘೋಷಿಸಿದ್ದಾರೆ.

ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾ, ನಾನು ನಿಮಗೆ ಶುಭ ಸುದ್ದಿಯನ್ನು ಹೇಳಲು ಬಂದಿದ್ದೇನೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಳನಿಸ್ವಾಮಿ ಎನ್‌ಡಿಎ ಮೈತ್ರಿಕೂಟವನ್ನು ಮುನ್ನಡೆಸಲಿದ್ದಾರೆ. ಈ ಚುನಾವಣೆಗಳು ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ನಡೆಯಲಿವೆ ಎಂದು ಅಮಿತ್ ಶಾ ಹೇಳಿದರು.

1998ರಿಂದ ಎಐಎಡಿಎಂಕೆ ಮತ್ತು ಬಿಜೆಪಿ ಎನ್‌ಡಿಎ ಬಣದ ಭಾಗವಾಗಿದ್ದು, ಎಐಎಡಿಎಂಕೆ ನಾಯಕಿ ಜಯಲಲಿತಾ ಮತ್ತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಒಟ್ಟಿಗೆ ಕೆಲಸ ಮಾಡಿದ್ದಾರೆ ಎಂಬುದನ್ನು ಮತ್ತೊಮ್ಮೆ ಉಲ್ಲೇಖಿಸಿದ ಗೃಹ ಸಚಿವ ಅಮಿತ್ ಶಾ, ‘ತಮಿಳುನಾಡಿನಲ್ಲಿ ಎನ್‌ಡಿಎ ಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುತ್ತದೆ ಎಂಬ ಭರವಸೆ ನನಗಿದೆ’ ಎಂದು ಹೇಳಿದ್ದಾರೆ.

ಇನ್ನು ಎಐಎಡಿಎಂಕೆ ಯಾವುದೇ ಷರತ್ತುಗಳು ಮತ್ತು ಬೇಡಿಕೆಗಳನ್ನು ನೀಡಿಲ್ಲ . ಎಐಎಡಿಎಂಕೆಯ ಆಂತರಿಕ ವಿಷಯಗಳಲ್ಲಿ ನಮಗೆ ಯಾವುದೇ ಹಸ್ತಕ್ಷೇಪವಿರುವುದಿಲ್ಲ. ಈ ಮೈತ್ರಿಕೂಟವು ಎನ್‌ಡಿಎ ಮತ್ತು ಎಐಎಡಿಎಂಕೆ ಎರಡಕ್ಕೂ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದರು.

ಈ ಮೈತ್ರಿಕೂಟಗೆ ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆಯ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು, ದಲಿತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನಿಸಿ ಜನರು ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ. ಡಿಎಂಕೆ ಸರ್ಕಾರವು 39,000 ಕೋಟಿ ರೂ.ಗಳ ಮದ್ಯ ಹಗರಣ, ಮರಳು ಗಣಿಗಾರಿಕೆ ಹಗರಣ, ಇಂಧನ ಹಗರಣ, ಎಲ್‌ಸಿಒಟಿ ಹಗರಣ, ಸಾರಿಗೆ ಹಗರಣ, ಹಣ ವರ್ಗಾವಣೆ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಭಾಗಿಯಾಗಿದೆ. ತಮಿಳುನಾಡಿನ ಜನರು ಉದಯನಿಧಿ ಮತ್ತು ಸ್ಟಾಲಿನ್ ಅವರಿಂದ ಉತ್ತರಗಳನ್ನು ಹುಡುಕುತ್ತಿದ್ದಾರೆ ಎಂದಿದ್ದಾರೆ.

ನಿರ್ಗಮಿತ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ ಮತ್ತು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೂಡ ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!