ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಹಾದಿಯಲ್ಲಿದೆ. ಇಂದು (ಏ.13) ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆ ಬಿಡುಗಡೆಯಾದಾಗ ‘ಮೋದಿಕಿ ಗ್ಯಾರಂಟಿ’ ಎಂಬ ಘೋಷಣೆಗಳು ಕೇಳಿ ಬಂದವು.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಜೈಶಂಕರ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಡಾ. ಬಿಆರ್ ಅಂಬೇಡ್ಕರ್ ಜನ್ಮದಿನ. ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ, ನಿರೀಕ್ಷಿಸಿ