ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಮಾನ್ಯ ಪ್ರಧಾನಿಯವರದು. ಮೋದಿಜೀ ಅವರಿಗೆ ಇನ್ನೂ ಹೆಚ್ಚು ಬಲ ಕೊಡುವ ಕೆಲಸ ನಡೆಸಬೇಕಿದೆ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ, ಮುಖಂಡರು, ಕಾರ್ಯಕರ್ತರು ಆಹಾರದ ಕಿಟ್ ನೀಡುವುದು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಉಚಿತ ಔಷಧಿ, ಮಾತ್ರೆ ಕೊಡುವ ಕೆಲಸ ಮಾಡಿದ್ದರು ಎಂದು ನೆನಪಿಸಿದರು. ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗುವುದು. ಎಲ್ಲ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದರು. ಮುಂದಿನ 40-45 ದಿನಗಳ ಕಾಲ ಎರಡು ಹಂತಗಳ ಅಭಿಯಾನದಲ್ಲಿ ಭಾಗವಹಿಸೋಣ ಎಂದು ತಿಳಿಸಿದರು.
ಬಿಜೆಪಿ ಸದಸ್ಯತ್ವ ಅಭಿಯಾನ ಪರ್ವದ ಉದ್ಘಾಟನೆ ಇವತ್ತು ನಡೆದಿದೆ. ಇದು ಹಬ್ಬದ ವಾತಾವರಣ. ಗಣೇಶ ಹಬ್ಬದ ಹತ್ತಿರದಲ್ಲಿ ನಾವಿದ್ದು, ರಾಜ್ಯದ ಜನತೆಗೆ ಗೌರಿಗಣೇಶ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಮೊನ್ನೆ ಈ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಅರ್ಥಪೂರ್ಣ ಅಭಿಯಾನ ನಡೆಸಬೇಕೆಂದು ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ ಅವರ ಅಪೇಕ್ಷೆ ಇದೆ. ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ. ಬಿಜೆಪಿ ಸರ್ವಸ್ಪರ್ಶಿ- ಸರ್ವವ್ಯಾಪಿ ಎಂದರು.
ಕಳೆದ ಬಾರಿ 1.04 ಕೋಟಿ ಸದಸ್ಯರು
ಈಬಾರಿ ಇನ್ನೂ ಹೆಚ್ಚು ಗುರಿ
ಹೆಡಿಂಗ್ ಮಾತ್ರ 1 ಕೋಟಿ ಎಂದಿದೆ….
ತಪ್ಪಾಗಿದೆ ಅಲ್ವ?