ಏಕಕಾಲದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ‌, ಕಾಂಗ್ರೆಸ್ ಅಭ್ಯರ್ಥಿಗಳು

ಹೊಸದಿಗಂತ ವರದಿ ಹುಬ್ಬಳ್ಳಿ :

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ‌ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಬುಧವಾರ ಏಕ ಕಾಲಕ್ಕೆ ಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, ಈ ಚುನಾವಣೆಯಲ್ಲಿ 50 ಸಾವಿರ ಮತಗಳ ಅಂತರದಿಂದ ಜಯಗಳಿಸುತ್ತೇನೆ. ಜನರ ನಾಡಿ ಮಿಡಿತ ಬಗ್ಗೆ ನನಗೆ ಸರಿಯಾಗಿಗೊತ್ತಿದೆ ಎಂದರು.

ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಮಾತನಾಡಿ, ಸೆಂಟ್ರಲ್ ಕ್ಷೇತ್ರದಲ್ಲಿ ಕಾರ್ಯಕರ್ತರ ದೊಡ್ಡ ಬಳಗವಿದೆ. ಸಾಮಾನ್ಯ ಕಾರ್ಯಕರ್ತನಾದ ನನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾವಿದೆ. ಹಿರಿಯರಾದ ಜಗದೀಶ ಶೆಟ್ಟರ್ ಅವರ ಆಶೀರ್ವಾದ ಸಹ ನಾನು ನಾಮಪತ್ರ ಸಲ್ಲಿಸುವ ವೇಳೆ ಪಡೆದಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಆರ್.ವಿ. ದೇಶಪಾಂಡೆ, ಎಂ.ಬಿ.ಪಾಟೀಲ, ಶಾಸಕ ಪ್ರಸಾದ ಅಬ್ಬಯ್ಯ ಇದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!