2024ರ ಎಲೆಕ್ಷನ್‌ಗೆ ಜೆಡಿಯು ಜೊತೆ ಮೈತ್ರಿ ಮುಂದುವರಿಕೆ ಘೋಷಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಎದುರಿಸಲು ಜೆಡಿಯು ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮುಂದುವರೆಯಲಿದೆ. ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಮುಕ್ತಾಯದ ನಂತರ, 2024 ರ ಲೋಕಸಭೆ ಚುನಾವಣೆ ಮತ್ತು 2025 ರ ಬಿಹಾರ ವಿಧಾನಸಭಾ ಚುನಾವಣೆಗಳನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ಜೊತೆ ಮೈತ್ರಿಯೊಂದಿಗೆ ಎದುರಿಸುವುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ.

ಈ ಕುರಿತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಜೆಡಿಯು ಜೊತೆ ಯಾವುದೇ ರೀತಿಯ ಬಿರುಕು ಇದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. “ಜೆಡಿಯು ಜೊತೆ ಯಾವುದೇ ಹಗ್ಗ ಜಗ್ಗಾಟ ನಡೆಯುತ್ತಿಲ್ಲ ಮತ್ತು ಬಿಜೆಪಿ ಯಾವಾಗಲೂ ಮೈತ್ರಿ ಧರ್ಮವನ್ನು ಅನುಸರಿಸುತ್ತಿದೆ. ನಾವು 2024 ಅಥವಾ 2025 ರ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರೂ ಕೂಡ ಮಾಧ್ಯಮದೊಂದಿಗೆ ಮಾತನಾಡುವಾಗ ಇದೇ ಅಂಶಗಳನ್ನು ವ್ಯಕ್ತಪಡಿಸಿದ್ದಾರೆ. “ನಾವು ಯಾವಾಗಲೂ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡು ಹೋರಾಡುತ್ತೇವೆ. 2024 ಮತ್ತು 2025 ರಲ್ಲಿ ಮಾತ್ರವಲ್ಲ, ಅದರ ನಂತರವೂ ಕೂಡ ಮೈತ್ರಿಯಿರುತ್ತದೆ” ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!