ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆ ಚುನಾವಣೆ ಹಿನ್ನೆಲ್ಲೆಯಲ್ಲಿ ಬಿಜೆಪಿ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವರಿಗೆ ಟಿಕೆಟ್ ನೀಡುವ ಮೂಲಕ ಮಹತ್ವದ ಕುತೂಹಲಗಳಿಗೆ ತೆರೆ ಎಳೆದಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ, ಹೈನುಗಾರಿಕೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.
ಈ ಹಿಂದೆ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿತ್ತು, ಆದರೆ ಇದಕ್ಕೆಲ್ಲ ಇದೀಗ ಅಂತಿಮ ತೆರೆ ಬಿದ್ದಿದೆ. ಇಬ್ಬರು ಕೇಂದ್ರ ಸಚಿವರಿಗೆ ರಾಜ್ಯಸಭೆ ಟಿಕೆಟ್ ನೀಡುವ ಮೂಲಕ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಈ ಇಬ್ಬರು ಅಭ್ಯರ್ಥಿಗಳ ಜೊತೆ ಉಮೇಶ್‌ನಾಥ್ ಮಹಾರಾಜ್, ಮಾಯಾ ನರೋಲಿಯಾ, ಬಾನ್ಸಿಲಾಲ್ ಗುರ್ಜಾರ್ ಅವರಿಗೆ ಕೂಡ ಟಿಕೆಟ್ ನೀಡಲಾಗಿದ್ದು, ಒಟ್ಟು ಐದು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.