Monday, January 30, 2023

Latest Posts

ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ : ನೃತ್ಯ ಮಾಡಿ ಸಿಹಿ ಹಂಚಿದ ಕಾರ್ಯಕರ್ತರು

ಹೊಸದಿಗಂತ ವರದಿ ಮಂಡ್ಯ :

ಗುಜರಾತ್‌ನಲ್ಲಿ ಭಾರೀ ಸ್ಥಾನಗಳನ್ನು ಗಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತಿರುವುದನ್ನು ಸ್ವಾಗತಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ‌್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪರವಾಗಿ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಮುಖಂಡ ಎಚ್.ಆರ್. ಅರವಿಂದ್ ಮಾತನಾಡಿ, ನೆಚ್ಚಿನ ಪ್ರಧಾನಿ ನರೇಂದ್ರಮೋದಿಯವರು ಉತ್ತಮ ಆಡಳಿತ ನೀಡಿರುವಂತಹ ರಾಜ್ಯ ಎಂದರೆ ಗುಜರಾತ್, ಮುಂದಿನ ದಿನಗಳಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದುತ್ವವಾದ, ರಾಷ್ಟ್ರೀಯ ಚಿಂತನೆಗಳು ಹಾಗೂ ಅಭಿವೃದ್ಧಿ ಮಂತ್ರಕ್ಕೆ ಮತದಾರರು ಮನಸೋತು ಸತತ 7ನೇ ಬಾರಿ ಗುಜರಾತ್‌ನಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ಸಹ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಅಶೋಕ್ ಜಯರಾಂ ಮಾತನಾಡಿ, ನೆಚ್ಚಿನ ಪ್ರಧಾನಿ ನರೇಂದ್ರಮೋದಿಯವರ ಜನಪರ ಆಡಳಿತ ಹಾಗೂ ಅವರು ಗುಜರಾತ್‌ನಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಕಾರ‌್ಯಗಳನ್ನು ಮೆಚ್ಚಿ ಅಲ್ಲಿನ ಜನತೆ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ಸತತವಾಗಿ 7ನೇ ಬಾರಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜನತೆ ಆಶೀರ್ವಾದ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ಆಡಳಿತ ಕೊಡುವ ನಿಟ್ಟಿನಲ್ಲಿ ಉತ್ತವಾದ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

ಗುಜರಾತ್ ವಿಧಾನ ಸಭಾ ಚುನಾವಣೆ ಮುಂದಿನ 2023ರ ಕರ್ನಾಟಕ ವಿಧಾನ ಸಭಾ ಚುನಾವಣೆಯ ದಿಕ್ಸೂಚಿಯಾಗಲಿದ್ದು, ರಾಜ್ಯದಲ್ಲೂ ಸಹ ಜನತೆ ಮತ್ತೊಮ್ಮೆ ಬಿಜೆಪಿಗೆ ಅವಕಾಶ ಮಾಡಿಕೊಡಲಿದ್ದಾರೆ. ಜನರ ಆಡಳಿತವನ್ನು ನೀಡಿರುವುದನ್ನು ಮನಗಂಡಿರುವ ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡರಾದ ಪ.ನಾ. ಸುರೇಶ್, ನಿತ್ಯಾನಂದ, ಶಶಿಕುಮಾರ್, ಶಿವಲಿಂಗಯ್ಯಘಿ, ಮಹೇಶ್, ಹೊಸಹಳ್ಳಿ ಸಿದ್ದರಾಜು, ಪ್ರಸನ್ನಕುಮಾರ್, ಸಿ.ಟಿ. ಮಂಜುನಾಥ್, ವಿವೇಕ್ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ನೃತ್ಯಮಾಡಿ, ಸಾರ್ವಜನಿಕರಿಕೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!