ಜ. 25-27ರವರೆಗೆ ಬಿಜೆಪಿಯಿಂದ ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತಾ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೂರು ದಿನಗಳ ಸಭೆ ಜ. 25, 26 ಮತ್ತು 27 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ಜರಗಲಿದೆ ಎಂದವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!